ಚಂದ್ರಚೂಡ ಶಿವಶಂಕರ

ಚಂದ್ರಚೂಡ ಶಿವಶಂಕರ 
[Composed by – Sree Purandara Dasaru]

ಚಂದ್ರಚೂಡ ಶಿವಶಂಕರ ಪಾರ್ವತಿ ರಮಣನೆ ನಿನಗೆ ನಮೋ ನಮೋ || ಪ ||
ಸುಂದರ ಮೃಗಧರ ಪಿನಾಕ ಧನುಕರ ಗಂಗಾ ಶಿರ
ಗಜಚರ್ಮಾಂಬರಧರ ನಮೋ ನಮೋ || ಅ ಪ ||

ನಂದಿವಾಹನಾನಂದದಿಂದ ಮೂಜಗದಿ ಮೆರವೆ ನೀನೇ
ಅಂದು ಅಮೃತ ಘಟದಿಂದುದಿಸಿದ ವಿಷ ತಂದು ಭುಜಿಸಿದವ ನೀನೇ
ಕಂದರ್ಪನ ಕ್ರೋಧದಿಂದ ಕಣ್ತೆರೆದು ಕೊಂದ ಉಗ್ರನು ನೀನೇ
ಇಂದಿರೇಶ ಶ್ರೀ ರಾಮನ ಪಾದವ ಚಂದದಿ ಪೊಗಳುವ ನೀನೇ || ೧ ||

ಬಾಲಮೃಕಂಡಜನ ಕಾಲನು ಎಳೆವಾಗ ಪಾಲಿಸಿದವ ನೀನೇ
ವಾಲಯದಿ ಕಪಾಲ ಪಿಡಿದು ಭಿಕ್ಷೆ ಬೇಡೋ ದಿಗಂಬರ ನೀನೇ
ಕಾಲಕೂಟವ ಪಾನಮಾಡಿದ ನೀಲಕಂಠನು ನೀನೇ
ಜಾಲ ಮಾಡಿದ ಗೋಪಾಲನೆಂಬ ಹೆಣ್ಣಿಗೆ ಮರುಳಾದವ ನೀನೇ || ೨ ||

ಧರೆಗೆ ದಕ್ಷಿಣ ಕಾವೇರಿತೀರ ಕುಂಭಪುರವಾಸನು ನೀನೇ
ಕೊರಳೋಳು ಭಸ್ಮ ರುದ್ರಾಕ್ಷಿಯ ಧರಿಸಿದ ಪರಮ ವೈಷ್ಣವ ನೀನೆ
ಕರದಲಿ ವೀಣೆಯ ನುಡಿಸುವ ನಮ್ಮ ಉರಗಭೂಷಣನು ನೀನೇ
ಗರುಡಗಮನ ಶ್ರೀ ಪುರಂದರವಿಠಲಗೆ ಪ್ರಾಣಪ್ರಿಯನು ನೀನೆ || ೩||

No comments:

Post a Comment